ದಾನಿಯೇಲ 9:6 - ಕನ್ನಡ ಸಮಕಾಲಿಕ ಅನುವಾದ6 ನಿಮ್ಮ ಹೆಸರಿನಲ್ಲಿ ನಮ್ಮ ಅರಸರಿಗೂ, ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ ದೇಶದ ಎಲ್ಲಾ ಜನರಿಗೂ ಮಾತನಾಡಿದ ನಿಮ್ಮ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯಜನರು, ಇವರಿಗೆಲ್ಲ ನಿನ್ನ ಹೆಸರಿನ ಮೇಲೆ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪ್ರವಾದಿಗಳು ಹೇಳಿದ್ದನ್ನು ನಾವು ಕೇಳಲಿಲ್ಲ. ಅವರು ನಿನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನಿನ್ನ ಪರವಾಗಿ ಹೇಳಿದರು. ಅವರು ನಮ್ಮ ರಾಜರುಗಳಿಗೆ, ನಮ್ಮ ನಾಯಕರುಗಳಿಗೆ ಮತ್ತು ನಮ್ಮ ಹಿರಿಯರಿಗೆ ಹೇಳಿದರು. ಅವರು ಇಸ್ರೇಲಿನ ಎಲ್ಲ ಜನರಿಗೆ ಹೇಳಿದರು. ಆದರೆ ನಾವು ಆ ಪ್ರವಾದಿಗಳ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿ |
“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.