Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:9 - ಕನ್ನಡ ಸಮಕಾಲಿಕ ಅನುವಾದ

9 ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:9
28 ತಿಳಿವುಗಳ ಹೋಲಿಕೆ  

“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.


ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, ಸಂಪೂರ್ಣ ವಿಮೋಚನೆಯೂ ಇರುತ್ತದೆ.


ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.


ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.


ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.


ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


ನಿಮ್ಮ ಹೆಸರಿನಲ್ಲಿ ನಮ್ಮ ಅರಸರಿಗೂ, ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ ದೇಶದ ಎಲ್ಲಾ ಜನರಿಗೂ ಮಾತನಾಡಿದ ನಿಮ್ಮ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡಲಿಲ್ಲ.


ಯೆಹೋವ ದೇವರೇ, ನಮ್ಮ ಅರಸರಿಗೂ ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ, ನಮಗೂ ನಾಚಿಕೆಯಾಗಿದೆ. ಏಕೆಂದರೆ ನಿಮಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ.


ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು