Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:13 - ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ನೀವು ಪ್ರತಿಯೊಂದು ಗೋತ್ರದಿಂದ ಜ್ಞಾನಿಗಳೂ ವಿವೇಕಿಗಳೂ ಪ್ರಖ್ಯಾತರೂ ಆದ ವ್ಯಕ್ತಿಗಳನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳಾಗಿ ನೇಮಿಸುತ್ತೇನೆ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಬುದ್ಧಿವಿವೇಕಗಳಿಂದ ಪ್ರಸಿದ್ಧರಾದ ಪುರುಷರನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುವೆನು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಜ್ಞಾನಿಗಳೂ, ವಿವೇಕಿಗಳೂ, ಪ್ರಖ್ಯಾತರೂ ಆದ ವ್ಯಕ್ತಿಗಳನ್ನು ಆರಿಸಿಕೊಳ್ಳಿ; ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುತ್ತೇನೆ,’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದದರಿಂದ ನೀವು ಪ್ರತಿಯೊಂದು ಕುಲದಿಂದ ಪ್ರಸಿದ್ಧರಾದ ಬುದ್ಧಿವಿವೇಕವುಳ್ಳ ಪುರುಷರನ್ನು ಆರಿಸಿಕೊಳ್ಳಿರಿ; ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇವಿುಸುವೆನು ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನಿಮ್ಮನಿಮ್ಮ ಕುಲಗಳಿಂದ ಯೋಗ್ಯರಾದವರನ್ನು ಆರಿಸಿರಿ. ಅವರನ್ನು ನಿಮ್ಮ ನಾಯಕರನ್ನಾಗಿ ನೇಮಿಸುವೆನು. ಅವರು ವಿವೇಕಿಗಳಾಗಿಯೂ ಅನುಭವಶಾಲಿಗಳಾಗಿಯೂ ಇರಬೇಕು’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:13
7 ತಿಳಿವುಗಳ ಹೋಲಿಕೆ  

ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?


ಅದಕ್ಕೆ ನೀವು ನನಗೆ ಉತ್ತರವಾಗಿ, “ನೀನು ಹೇಳಿದ ಮಾತು ಮಾಡುವುದಕ್ಕೆ ಒಳ್ಳೆಯದು,” ಎಂದಿರಿ.


“ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು