Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:16 - ಕನ್ನಡ ಸಮಕಾಲಿಕ ಅನುವಾದ

16 ಆ ನ್ಯಾಯಾಧಿಪತಿಗಳಿಗೆ ಆ ಕಾಲದಲ್ಲಿ ನಾನು, “ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಾಯೇಲರ ವ್ಯಾಜ್ಯವಾಗಿರಬಹುದು. ಇಸ್ರಾಯೇಲರಲ್ಲದವರ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ನ್ಯಾಯಾಧಿಪತಿಗಳಿಗೆ ನಾನು ಆಗ ಕೊಟ್ಟ ಸೂಚನೆ ಇದು: ‘ನೀವು ಸರ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಯೇಲರ ವ್ಯಾಜ್ಯವಾಗಿರಬಹುದು. ಅನ್ಯರೊಡನೆ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ - ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು; ಅವರು ಇಸ್ರಾಯೇಲ್ಯರೊಡನೆ ವ್ಯಾಜ್ಯವಾಡಿದರೂ ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:16
22 ತಿಳಿವುಗಳ ಹೋಲಿಕೆ  

ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.


ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


“ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.


ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ? ಜನರಲ್ಲಿ ನೀವು ಯಥಾರ್ಥವಾಗಿ ನ್ಯಾಯತೀರಿಸುವಿರೋ?


ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.


ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ಇದಲ್ಲದೆ ಮೋಶೆ ಅದೇ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ:


ನಿನ್ನ ನಾಡಿನ ಸಹೋದರನಾಗಲಿ, ಪರದೇಶಿಯವನಾಗಲಿ, ಬಡ ಮತ್ತು ನಿರ್ಗತಿಕನಾಗಿರುವ ಕೂಲಿಯವನನ್ನು ಬಾಧಿಸಬಾರದು.


ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, ಅವರಿಗೆದುರಾಗಿ ಅವನನ್ನು ನೇಮಿಸು.


“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಜ್ಞಾನಿಗಳನ್ನು ಕರೆಯಿಸಿ, ಒಂದೊಂದು ಗೋತ್ರದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದೆನು.


ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.


ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು