Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:27 - ಕನ್ನಡ ಸಮಕಾಲಿಕ ಅನುವಾದ

27 ನೀವು ನಿಮ್ಮ ಗುಡಾರಗಳಲ್ಲಿ ಗೊಣಗುಟ್ಟಿ, “ಯೆಹೋವ ದೇವರು ನಮ್ಮನ್ನು ಹಗೆ ಮಾಡಿದ್ದರಿಂದ, ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ, ನಮ್ಮನ್ನು ನಾಶಮಾಡುವುದಕ್ಕೆ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಿಮ್ಮ ನಿಮ್ಮ ಡೇರೆಗಳಲ್ಲಿ ಗೊಣಗುಟ್ಟಿದಿರಿ; ‘ಸರ್ವೇಶ್ವರ ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಅಮೋರಿಯರ ಕೈಗೆ ಒಪ್ಪಿಸಿ ಸಂಹರಿಸಬೇಕೆಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿಮ್ಮನಿಮ್ಮ ಗುಡಾರಗಳಲ್ಲಿ ಯೆಹೋವನ ವಿರುದ್ಧವಾಗಿ ಗೊಣಗುಟ್ಟಿದಿರಿ, ‘ನಮ್ಮ ಯೆಹೋವನು ನಮ್ಮನ್ನು ದ್ವೇಷಿಸುತ್ತಾನೆ! ನಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ಅಮೋರಿಯರಿಂದ ನಾಶಪಡಿಸುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:27
8 ತಿಳಿವುಗಳ ಹೋಲಿಕೆ  

ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ, ಆ ದೇಶದವರು, ‘ಯೆಹೋವ ದೇವರು ಇಸ್ರಾಯೇಲರಿಗೆ ವಾಗ್ದಾನ ಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.


ತಮ್ಮ ಗುಡಾರಗಳಲ್ಲಿ ಗೊಣಗುಟ್ಟಿ ಯೆಹೋವ ದೇವರ ಮಾತನ್ನು ಹೇಳದೆ ಹೋದರು.


ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ?


ನೀವು ಕಠಿಣ ಮನುಷ್ಯರೆಂದು ನಾನು ನಿಮಗೆ ಭಯಪಟ್ಟೆನು. ನೀನು ಕೂಡಿಡದಿರುವುದನ್ನು ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ,’ ಎಂದನು.


“ಆಗ ಒಂದು ಚಿನ್ನದ ನಾಣ್ಯ ಹೊಂದಿದ್ದವನು ಬಂದು, ‘ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು.


ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ಇಸ್ರಾಯೇಲರು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಸಾಕಾಗುವಷ್ಟು ರೊಟ್ಟಿಯನ್ನು ತಿನ್ನುತ್ತಿದ್ದಾಗ, ಯೆಹೋವ ದೇವರ ಕೈಯಿಂದ ಸತ್ತು ಹೋಗಿದ್ದರೆ ಒಳ್ಳೆಯದಾಗಿತ್ತು. ಇಡೀ ಜನಾಂಗವೇ ಹಸಿವೆಯಿಂದ ಸತ್ತು ಹೋಗುವಂತೆ ನಮ್ಮನ್ನು ಈ ಮರುಭೂಮಿಗೆ ಬರಮಾಡಿದ್ದೀರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು