ಧರ್ಮೋಪದೇಶಕಾಂಡ 1:28 - ಕನ್ನಡ ಸಮಕಾಲಿಕ ಅನುವಾದ28 ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು. ಅಧ್ಯಾಯವನ್ನು ನೋಡಿ |
‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”