ಧರ್ಮೋಪದೇಶಕಾಂಡ 1:3 - ಕನ್ನಡ ಸಮಕಾಲಿಕ ಅನುವಾದ3 ನಲ್ವತ್ತನೆಯ ವರ್ಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿನದಲ್ಲಿ, ಮೋಶೆಯು ಇಸ್ರಾಯೇಲರಿಗೆ, ಯೆಹೋವ ದೇವರು ಅವನಿಗೆ ಅವರ ವಿಷಯವಾಗಿ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾತನಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮೋಶೆಯು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು. ಅಧ್ಯಾಯವನ್ನು ನೋಡಿ |