Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:36 - ಕನ್ನಡ ಸಮಕಾಲಿಕ ಅನುವಾದ

36 ಯೆಫುನ್ನೆಯ ಮಗ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸಿದ್ದರಿಂದ, ಅವನು ಸಂದರ್ಶಿಸಿದ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಮತ್ತು ಯೆಹೋವನು “ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ‘ಯೆಫುನ್ನೆಯ ಮಗ ಕಾಲೇಬನೊಬ್ಬನೇ ಸರ್ವೇಶ್ವರನಾದ ನನ್ನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೆ ಹಾಗು ಅವನ ಸಂತತಿ ಅವರಿಗೆ ಕೊಡುವೆನು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಆ ದೇಶವನ್ನು ನೋಡುವನು. ಕಾಲೇಬನು ಸಂಚರಿಸಿದ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನು. ಯಾಕೆಂದರೆ ನಾನು ಆಜ್ಞಾಪಿಸಿದ್ದನ್ನೆಲ್ಲ ಕಾಲೇಬನು ಮಾಡಿದನು’ ಎಂದು ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:36
10 ತಿಳಿವುಗಳ ಹೋಲಿಕೆ  

ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು.


ಯೆಹೋವ ದೇವರನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಬೇರಾರೂ ನೋಡುವುದಿಲ್ಲ.


ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.


ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.


ಯೆಹೂದ ಗೋತ್ರದ ಯೆಫುನ್ನೆಯ ಮಗ ಕಾಲೇಬನು,


“ಈ ಜನರ ಹೆಸರುಗಳು ಇವೇ. “ಯೆಹೂದನ ಕುಟುಂಬದಿಂದ ಯೆಫುನ್ನೆಯ ಮಗ ಕಾಲೇಬನೂ,


“ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ?


ನನ್ನ ಪ್ರಾಣವು ನಿಮ್ಮನ್ನು ಆತುಕೊಂಡಿದೆ. ನಿಮ್ಮ ಬಲಗೈ ನನಗೆ ಬೆಂಬಲವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು