ಧರ್ಮೋಪದೇಶಕಾಂಡ 1:39 - ಕನ್ನಡ ಸಮಕಾಲಿಕ ಅನುವಾದ39 ಇದಲ್ಲದೆ ಸೆರೆಯಾಗಿ ಹೋಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈ ಹೊತ್ತು ಒಳ್ಳೆಯದು, ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳು ಅದರಲ್ಲಿ ಪ್ರವೇಶಿಸುವರು. ನಾನು ಅವರಿಗೆ ಅದನ್ನು ಕೊಡುವೆನು, ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಒಳ್ಳೇದು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು; ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿ |