ಧರ್ಮೋಪದೇಶಕಾಂಡ 1:4 - ಕನ್ನಡ ಸಮಕಾಲಿಕ ಅನುವಾದ4 ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದ ಮೇಲೆಯೂ, ಅಷ್ಟಾರೋತ್‌ನಲ್ಲಿ, ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಎದ್ರೈಯಲ್ಲಿ ಸೋಲಿಸಿದ ಮೇಲೆಯೂ ಮೋಶೆ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂದರೆ ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಲವತ್ತನೆಯ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ತನಗೆ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅಂದರೆ [ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ] ನಾಲ್ವತ್ತನೆಯ ವರುಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ಯರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.) ಅಧ್ಯಾಯವನ್ನು ನೋಡಿ |