Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:5 - ಕನ್ನಡ ಸಮಕಾಲಿಕ ಅನುವಾದ

5 ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆ ಈ ನಿಯಮವನ್ನು ವಿವರಿಸುವುದಕ್ಕೆ ಪ್ರಾರಂಭಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜೋರ್ಡನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆ ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೊರ್ದನ್ ಹೊಳೆಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವದಕ್ಕೆ ಪ್ರಾರಂಭಿಸಿ ಹೇಳಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಮೋವಾಬ್ಯರ ಸ್ಥಳದಲ್ಲಿ ಪಾಳೆಯ ಮಾಡಿಕೊಂಡಿದ್ದರು. ದೇವರು ತಿಳಿಸಿದ ಕಟ್ಟಳೆಗಳನ್ನು ಮೋಶೆಯು ವಿವರಿಸುತ್ತಾ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:5
8 ತಿಳಿವುಗಳ ಹೋಲಿಕೆ  

“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.


ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.


ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು?


ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದ ಮೇಲೆಯೂ, ಅಷ್ಟಾರೋತ್‌ನಲ್ಲಿ, ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಎದ್ರೈಯಲ್ಲಿ ಸೋಲಿಸಿದ ಮೇಲೆಯೂ ಮೋಶೆ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿದನು.


ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮಗೆ, “ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು,


ಮೋಶೆಯು ಇಸ್ರಾಯೇಲರ ಮುಂದೆ ಇಟ್ಟ ದೇವರ ನಿಯಮವು ಇದೇ.


ಯೊರ್ದನ್ ನದಿಯ ಆಚೆಯಲ್ಲಿ ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಅವನನ್ನು ಮೋಶೆಯೂ, ಇಸ್ರಾಯೇಲರೂ ಈಜಿಪ್ಟಿನೊಳಗಿಂದ ಹೊರಟ ಮೇಲೆ ಸೋಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು