Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:7 - ಕನ್ನಡ ಸಮಕಾಲಿಕ ಅನುವಾದ

7 ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಮೋರಿಯರು ವಾಸಿಸುವ ಬೆಟ್ಟಪ್ರಾಂತ್ಯಗಳಿಗೆ ಹೋಗಿರಿ, ಅದರ ಸುತ್ತಲೂ ಇರುವ ಜೋರ್ಡನಿನ ಬಯಲು ಪ್ರದೇಶಕ್ಕೆ, ಬೆಟ್ಟಪ್ರದೇಶಕ್ಕೆ, ಪಶ್ಚಿಮದ ಇಳಕಲುಪ್ರದೇಶಕ್ಕೆ, ನೆಗೆವ್ ಮತ್ತು ಸಮುದ್ರ ಕರಾವಳಿ ಪ್ರದೇಶಗಳಿಗೆ ಹೋಗಿರಿ. ಕಾನಾನ್ ಮತ್ತು ಲೆಬನೋನ್ ಪ್ರದೇಶಗಳ ಮೂಲಕ ಯೂಫ್ರೇಟೀಸ್ ಮಹಾನದಿಯವರೆಗೂ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:7
19 ತಿಳಿವುಗಳ ಹೋಲಿಕೆ  

ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.


ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.


“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.


ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.


ಗಿಲ್ಯಾದಿನ ದೇಶದಲ್ಲಿ ಅವನ ಪಶುಗಳು ಹೆಚ್ಚಾದುದರಿಂದ, ಅವನು ಪೂರ್ವದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲ್ಗೊಂಡು ಮರುಭೂಮಿಯ ಪ್ರದೇಶದವರೆಗೂ ವಾಸವಾಗಿದ್ದನು.


ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು.


ಆದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು ಬೆಟ್ಟಗಳೂ, ತಗ್ಗುಗಳೂ ಉಳ್ಳ ದೇಶವೇ; ಆಕಾಶದ ಮಳೆಯಿಂದ ಅದಕ್ಕೆ ನೀರು ದೊರೆಯುವುದು.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು.


ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.


ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.


ಆಗ ಇಸ್ರಾಯೇಲರು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಮರುಭೂಮಿಯಿಂದ ಪ್ರಯಾಣಮಾಡಿದರು. ಮೇಘವು ಪಾರಾನ್ ಎಂಬ ಮರುಭೂಮಿಯಲ್ಲಿ ಇಳಿಯಿತು.


ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು.


ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಜವಾಬ್ದಾರಿಯಾಗಿದ್ದನು. ತಗ್ಗುಗಳಲ್ಲಿರುವ ದನಗಳ ಮೇಲೆ ಅಡ್ಲಾಯಿಯ ಮಗನಾದ ಶಾಫಾಟನು ಜವಾಬ್ದಾರಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು