Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:8 - ಕನ್ನಡ ಸಮಕಾಲಿಕ ಅನುವಾದ

8 ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:8
39 ತಿಳಿವುಗಳ ಹೋಲಿಕೆ  

ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು,


“ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನ ಸಂತಾನವನ್ನು ಹೆಚ್ಚಿಸೇ ಹೆಚ್ಚಿಸುವೆನು,” ಎಂದು ಹೇಳಿದರಷ್ಟೆ.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.


ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವುದಿಲ್ಲ, ನನ್ನನ್ನು ಅಲಕ್ಷ್ಯ ಮಾಡಿದವರೆಲ್ಲರೂ ಅದನ್ನು ನೋಡುವುದಿಲ್ಲ.


ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ


ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಲಿ, ಅವರು ವಾಗ್ದಾನ ಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ.


ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.


ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀರಿ.


ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು. ಏಕೆಂದರೆ ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈಯೆತ್ತಿ ಪ್ರಮಾಣ ಮಾಡಿದ್ದೇನೆ. ಈ ದೇಶವು ನಿಮಗೆ ಬಾಧ್ಯವಾಗಿ ಬರುವುದು.


“ಕೆಟ್ಟ ಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಒಳ್ಳೆಯ ದೇಶವನ್ನು ನೋಡುವುದಿಲ್ಲ.


ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.


ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ,


ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.


ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.


ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ಯೆಹೋವ ದೇವರು ನನಗೆ, “ಜನರ ಮುಂದೆ ಹೋಗು, ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,” ಎಂದು ಆಜ್ಞಾಪಿಸಿದರು.


ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ.


ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ, “ಯೆಹೋವ ದೇವರು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನಾನು ಸೇರಿದ್ದಾಯಿತೆಂದು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಈಗ ನಾನು ಒಪ್ಪಿಕೊಳ್ಳುತ್ತೇನೆ,” ಎಂದು ಹೇಳಬೇಕು.


ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.


ನಿಮಗೆ ಕೊಡುತ್ತೇನೆಂದು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಯೆಹೋವ ದೇವರು ಭೂಮಿಯ ಮೇಲೆ ನಿಮ್ಮನ್ನು ಸಂತಾನ, ಪಶು ಮತ್ತು ಕೃಷಿ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವರು.


ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ.


ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ.


ಆಗ ಮೋಶೆಯು ಯೆಹೋಶುವನನ್ನು ಕರೆದು, ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ, “ಶಕ್ತಿಶಾಲಿಯಾಗಿರು, ಧೈರ್ಯವಾಗಿರು. ಏಕೆಂದರೆ ನೀನು ಈ ಜನರ ಸಂಗಡ ಹೋಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ಸೇರಿಸಬೇಕು. ನೀನು ಅವರಿಗೆ ಅದನ್ನು ಸೊತ್ತಾಗಿ ಹಂಚಿಕೊಡಬೇಕು.


ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.


ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು