Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:15 - ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೂ ಆತನು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:15
10 ತಿಳಿವುಗಳ ಹೋಲಿಕೆ  

ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು.


ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ.


ಅವರ ಸೇವಕನಾದ ಇಸ್ರಾಯೇಲಿನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,


“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು