ಧರ್ಮೋಪದೇಶಕಾಂಡ 10:17 - ಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ. ಅಧ್ಯಾಯವನ್ನು ನೋಡಿ |
“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.