Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:21 - ಕನ್ನಡ ಸಮಕಾಲಿಕ ಅನುವಾದ

21 ನೀವು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿಮಗೆ ಮಾಡಿದ ಅವರೇ ನಿಮ್ಮ ಸ್ತೋತ್ರವು. ಅವರೇ ನಿಮ್ಮ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನೊಬ್ಬನೇ ನಿಮ್ಮ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು. ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನನ್ನು ಮಾತ್ರ ನೀವು ಸ್ತುತಿಸಬೇಕು. ಆತನೇ ನಿಮ್ಮ ದೇವರು. ಆತನು ನಿಮಗಾಗಿ ಭಯಂಕರವಾದ ಮಹತ್ಕಾರ್ಯಗಳನ್ನು ಮಾಡಿದ್ದಾನೆ. ಅವುಗಳನ್ನು ನೀವು ಕಣ್ಣಾರೆ ಕಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:21
18 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ನೀವು ಪರಿಶುದ್ಧರು; ನೀವು ಇಸ್ರಾಯೇಲರ ಸ್ತೋತ್ರ ಸಿಂಹಾಸನದಲ್ಲಿರುವಿರಿ.


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.


ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದೆ, ಬೆಟ್ಟಗಳು ನಿನ್ನ ಸಮ್ಮುಖಕ್ಕೆ ಕರಗಿ ಹೋದವು.


ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.


ನಾನು ಸ್ತುತಿಸುವ ದೇವರೇ, ನೀವು ಮೌನವಾಗಿರಬೇಡಿರಿ.


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು.


ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.


ಅದಕ್ಕೆ ಯೆಹೋವ ದೇವರು, “ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿಯಲ್ಲಿಯೂ ಯಾವ ಜನಾಂಗದಲ್ಲಿಯೂ ಹಿಂದೆಂದಿಗೂ ಮಾಡದಿರುವಂಥ ಅದ್ಭುತಗಳನ್ನು ನಿನ್ನ ಎಲ್ಲಾ ಜನರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವೆಯೋ ಆ ಜನರೂ ಯೆಹೋವ ದೇವರ ಕಾರ್ಯವನ್ನು ನೋಡುವರು ಏಕೆಂದರೆ ನಾನು ನಿಮಗೆ ಮಾಡುವಂಥದ್ದು ಭಯಂಕರವಾಗಿರುವುದು.


ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು