Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:4 - ಕನ್ನಡ ಸಮಕಾಲಿಕ ಅನುವಾದ

4 ಆ ಹಲಗೆಗಳ ಮೇಲೆ ಯೆಹೋವ ದೇವರು ಮುಂಚೆ ಬರೆದಿದ್ದ ಪ್ರಕಾರ ಬರೆದರು. ಅವರು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿವಸದಲ್ಲಿ ಹೇಳಿದ ಆ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ, ನೀವು ಸಭೆಕೂಡಿದ ದಿನದಲ್ಲಿ, ನಿಮಗೆ ಹೇಳಿದ ಮಾತುಗಳನ್ನು ಅಂದರೆ, ಆ ಹತ್ತು ಆಜ್ಞೆಗಳನ್ನು ಅವರು ಮೊದಲಿನಂತೆಯೇ ಆ ಹಲಗೆಗಳ ಮೇಲೆ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೇಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು ಮುಂಚಿನಂತೆಯೇ ಇದರಲ್ಲೂ ದಶಾಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಬೆಟ್ಟದ ಬಳಿ ಒಟ್ಟಾಗಿ ಸೇರಿ ಬಂದಿದ್ದಾಗ ಆತನು ಬೆಂಕಿಯೊಳಗಿಂದ ಹೇಳಿದ್ದ ದಶಾಜ್ಞೆಗಳೇ ಇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:4
10 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ನನಗೆ ತಮ್ಮ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿನದಲ್ಲಿ ಹೇಳಿದ ಆಜ್ಞೆಗಳೆಲ್ಲಾ ಆ ಹಲಗೆಗಳಲ್ಲಿದ್ದವು.


ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.


ನೀವು ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಂದ ಬೇಡಿಕೊಂಡ ಪ್ರಕಾರ ಆಗುವುದು. ಆಗ ನೀವು, “ನಾವು ಸಾಯದಂತೆ ಇನ್ನು ಮೇಲೆ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ನಾವು ಕೇಳುವುದಿಲ್ಲ, ಈ ದೊಡ್ಡ ಬೆಂಕಿಯನ್ನೂ ನೋಡುವುದಿಲ್ಲ,” ಎಂದು ಹೇಳಿದಿರಿ.


ಯೆಹೋವ ದೇವರು ಮೋಶೆಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.


ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು