ಧರ್ಮೋಪದೇಶಕಾಂಡ 11:10 - ಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿಮಗೆ ದೊರಕಲಿರುವ ದೇಶವು ನೀವು ಹೊರಟುಬಂದ ಈಜಿಪ್ಟ್ ದೇಶದಂತಿಲ್ಲ. ಈಜಿಪ್ಟಿನಲ್ಲಿ ನೀವು ಬಿತ್ತನೆ ಮಾಡಿದ ಮೇಲೆ ನೀರನ್ನು ಹಾಯಿಸಲು ನಿಮ್ಮ ಕಾಲುಗಳನ್ನು ಬಳಸುತ್ತಿದ್ದಿರಿ. ನಿಮ್ಮ ತರಕಾರಿ ತೋಟಗಳಿಗೆ ನೀರು ಹಾಯಿಸುವಂತೆಯೇ ನಿಮ್ಮ ಗದ್ದೆಗಳಿಗೂ ನೀರನ್ನು ಹಾಯಿಸುತ್ತಿದ್ದಿರಿ. ಅಧ್ಯಾಯವನ್ನು ನೋಡಿ |