Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:14 - ಕನ್ನಡ ಸಮಕಾಲಿಕ ಅನುವಾದ

14 ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮಗೆ ಗೋದಿ, ದ್ರಾಕ್ಷೆ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂವಿುಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಸರಿಯಾಗಿ ನಡಿಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕಾಲಕಾಲಕ್ಕೆ ಸರಿಯಾಗಿ ನಿಮ್ಮ ದೇಶಕ್ಕೆ ನಾನು ಮಳೆಯನ್ನು ಕಳುಹಿಸುತ್ತೇನೆ. ಹಿಂಗಾರು, ಮುಂಗಾರು ಮಳೆ ತಕ್ಕ ಸಮಯದಲ್ಲಿ ಬೀಳುವುದು. ಆಗ ನೀವು ನಿಮ್ಮ ಧಾನ್ಯಗಳನ್ನು, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಶೇಖರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:14
15 ತಿಳಿವುಗಳ ಹೋಲಿಕೆ  

ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.


ನಿಮಗೆ ಮಳೆಯನ್ನು ತಕ್ಕ ಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವುದು. ಭೂಮಿಯ ಮರಗಳು ಅವುಗಳ ಫಲವನ್ನು ಕೊಡುವವು.


ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.


ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ.


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”


“ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.


ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ.


“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು