Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:16 - ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ನೀವು ಎಚ್ಚರದಿಂದಿರಬೇಕು; ನೀವು ಭ್ರಾಂತಿಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಆದ್ದರಿಂದ ಜಾಗರೂಕರಾಗಿರಿ. ಬೇರೆ ದೇವರುಗಳನ್ನು ಸೇವೆಮಾಡಿ ಆರಾಧಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:16
29 ತಿಳಿವುಗಳ ಹೋಲಿಕೆ  

ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.


ನನ್ನ ಹೃದಯವು ಮರುಳುಗೊಂಡು, ನನ್ನ ಕೈ ಅವುಗಳನ್ನು ನನ್ನ ಬಾಯಿಂದ ಗೌರವದಿಂದ ಮುಗಿದಿದ್ದರೆ,


ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.


ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು.


ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ಆದರೆ ನಿಮ್ಮ ಹೃದಯವು ತಿರುಗಿಬಿದ್ದು ನೀವು ಮಾತು ಕೇಳದೆ ಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆದವರಾಗಿ ಅಡ್ಡಬಿದ್ದು, ಅವುಗಳಿಗೆ ಸೇವೆ ಮಾಡಿದರೆ,


ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.


ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ಆಗ ಸಮುಯೇಲನು ಜನರಿಗೆ, “ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ. ಆದರೂ ಯೆಹೋವ ದೇವರನ್ನು ಬಿಟ್ಟು ತಿರುಗದೆ, ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರನ್ನು ಸೇವಿಸಿರಿ.


ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.


“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,


“ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ನೀವು ಭ್ರಮೆಗೊಂಡು ನಿಮ್ಮ ಮುಂದೆ ನಾಶವಾದವರ ಬಗ್ಗೆ ವಿಚಾರಣೆ ಮಾಡಬೇಡಿರಿ. “ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಪೂಜಿಸಿದವು? ನಾವೂ ಹಾಗೆ ಮಾಡೋಣ,” ಎಂದು ಹೇಳಬೇಡಿರಿ.


ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ,


ಹೀಗಿರುವುದರಿಂದ ನೀವು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಅನುಸರಿಸಿ ನಡೆಯದಂತೆ, ನಾನು ಇಂದು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.


ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದ ಬೊಂಬೆಗಳನ್ನೂ ನೀವು ನೋಡಿದ್ದೀರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು