Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:17 - ಕನ್ನಡ ಸಮಕಾಲಿಕ ಅನುವಾದ

17 ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂವಿುಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:17
18 ತಿಳಿವುಗಳ ಹೋಲಿಕೆ  

“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,


ಏಕೆಂದರೆ ನಿಮ್ಮ ಮಧ್ಯದಲ್ಲಿರುವ ನಿಮ್ಮ ಯೆಹೋವ ದೇವರು ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರು. ನಿಮ್ಮ ದೇವರ ಕೋಪವು ನಿಮ್ಮ ಮೇಲೆ ಉರಿಯಲು, ಅವರು ನಿಮ್ಮನ್ನು ಭೂಮಿಯ ಮೇಲಿನಿಂದ ತೆಗೆದುಹಾಕುವರು.


ನಾನು ಈ ದಿನ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆದು, ನಿಮಗೆ ಹೇಳುವುದೇನೆಂದರೆ, ನೀವು ಯೊರ್ದನನ್ನು ದಾಟಿ ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ, ಸಂಪೂರ್ಣವಾಗಿ ನಶಿಸುವಿರಿ.


“ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ದೇವರು ಮಳೆಯನ್ನು ತಡೆಹಿಡಿಯುತ್ತಾರೆ, ಭೂಮಿ ಒಣಗುತ್ತದೆ; ದೇವರು ನೀರನ್ನು ಬಿಟ್ಟರೆ, ಭೂಮಿಯನ್ನು ಹಾಳುಮಾಡುತ್ತದೆ.


ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.


ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು