ಧರ್ಮೋಪದೇಶಕಾಂಡ 11:18 - ಕನ್ನಡ ಸಮಕಾಲಿಕ ಅನುವಾದ18 ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹುಬ್ಬುಗಳ ನಡುವೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನಾನು ಹೇಳಿದ ಆಜ್ಞೆಗಳನ್ನು ಯಾವಾಗಲೂ ಜ್ಞಾಪಕದಲ್ಲಿಡಿರಿ. ಅದನ್ನು ನಿಮ್ಮ ಹೃದಯದಲ್ಲಿಡಿರಿ. ಅವುಗಳನ್ನು ಬರೆದು ಕೈಗಳಲ್ಲಿ ಮತ್ತು ಹಣೆಯ ಮೇಲೆ ಕಟ್ಟಿರಿ. ಇದು ನಿಮಗೆ ಜ್ಞಾಪಕ ಕೊಡುವುದು. ಅಧ್ಯಾಯವನ್ನು ನೋಡಿ |