Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:29 - ಕನ್ನಡ ಸಮಕಾಲಿಕ ಅನುವಾದ

29 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರವೇಶಿಸುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೇರಿಸಿದಾಗ, ನೀವು ಗೆರಿಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ದೇವರಾದ ಯೆಹೋವನು ನಿಮ್ಮನ್ನು ನಿಮ್ಮ ದೇಶಕ್ಕೆ ನಡೆಸುವನು. ನೀವು ಬೇಗನೆ ಅದನ್ನು ಸ್ವಾಧೀನ ಮಾಡಿಕೊಳ್ಳುವಿರಿ. ಆ ಸಮಯದಲ್ಲಿ ನೀವು ಗೆರಿಜ್ಜೀಮ್ ಬೆಟ್ಟದ ತುದಿಗೇರಿ ಅಲ್ಲಿಂದ ಆಶೀರ್ವಾದ ವಚನಗಳನ್ನು ನುಡಿಯಿರಿ. ಅನಂತರ ನೀವು ಎಬಾಲ್ ಬೆಟ್ಟದ ಮೇಲೇರಿ ಅಲ್ಲಿಂದ ಜನರಿಗೆ ಶಾಪವಚನಗಳನ್ನು ನುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:29
5 ತಿಳಿವುಗಳ ಹೋಲಿಕೆ  

ನಮ್ಮ ಪಿತೃಗಳು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸಿದರು. ಆದರೆ, ‘ಆರಾಧಿಸತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ’ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.


ನೀವು ಯೊರ್ದನನ್ನು ದಾಟಿದ ಮೇಲೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.


ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು