Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನಿಮ್ಮ ಕಣ್ಣುಗಳು ನೋಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ನಡಿಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ನಡೆಸಿದ ಆ ವಿಶೇಷಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ನಡಿಸಿದ ಆ ವಿಶೇಷಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ಮಾಡಿದ ಎಲ್ಲಾ ಮಹಾಕೃತ್ಯಗಳನ್ನು ನೋಡಿದವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:7
12 ತಿಳಿವುಗಳ ಹೋಲಿಕೆ  

ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ; ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ.


ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ, ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.


ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ?


ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು.


ಯೆಹೋವ ದೇವರು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದರು. ನಾವೆಲ್ಲರೂ ಈ ಹೊತ್ತು ಇಲ್ಲಿ ಜೀವದಿಂದಿದ್ದೇವೆ.


ರೂಬೇನನ ಮಗ ಎಲೀಯಾಬನ ಪುತ್ರರಾಗಿರುವ ದಾತಾನ್, ಅಬೀರಾಮರು ದಂಗೆಯೆದ್ದಾಗ, ಭೂಮಿಯು ಬಾಯಿತೆರೆದು ಅವರ ಮನೆಗಳನ್ನೂ, ಅವರಿಗಿದ್ದ ಎಲ್ಲಾ ಆಸ್ತಿಯನ್ನೂ, ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪಶುಪ್ರಾಣಿಗಳನ್ನೂ, ಸಮಸ್ತ ಇಸ್ರಾಯೇಲರ ಮಧ್ಯದಲ್ಲಿ ಹೇಗೆ ನುಂಗುವಂತೆ ದೇವರು ಮಾಡಿದರೆಂಬುದನ್ನೂ ಜ್ಞಾಪಕಮಾಡಿಕೊಳ್ಳಿರಿ.


ಹೀಗಿರುವುದರಿಂದ ಈಗ ನಾನು ನಿಮಗೆ ಬೋಧಿಸುವ ಈ ಆಜ್ಞೆಯನ್ನೆಲ್ಲಾ ಕೈಗೊಳ್ಳಬೇಕು. ಆಗ ನೀವು ಬಲವುಳ್ಳವರಾಗಿ, ಈ ನದಿದಾಟಿ ಆಚೆಯಿರುವ ದೇಶವನ್ನು ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳುವಿರಿ.


ಬಾಳ್ ಪೆಯೋರನ ವಿಷಯದಲ್ಲಿ ಯೆಹೋವ ದೇವರು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು. ಬಾಳ್ ಪೆಯೋರನನ್ನು ಹಿಂಬಾಲಿಸಿದ ಜನರನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿದರಲ್ಲವೇ?


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಆಜ್ಞೆಗಳನ್ನೂ ತೀರ್ಪುಗಳನ್ನೂ ಅನುಸರಿಸಬೇಕು,” ಎಂದು ಹೇಳಿದನು.


ಮೋಶೆಯು ಎಲ್ಲಾ ಇಸ್ರಾಯೇಲರನ್ನು ಕರೆದು ಅವರಿಗೆ ಹೀಗೆ ಹೇಳಿದನು: ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣು ಮುಂದೆಯೇ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.


ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು