Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:8 - ಕನ್ನಡ ಸಮಕಾಲಿಕ ಅನುವಾದ

8 ಹೀಗಿರುವುದರಿಂದ ಈಗ ನಾನು ನಿಮಗೆ ಬೋಧಿಸುವ ಈ ಆಜ್ಞೆಯನ್ನೆಲ್ಲಾ ಕೈಗೊಳ್ಳಬೇಕು. ಆಗ ನೀವು ಬಲವುಳ್ಳವರಾಗಿ, ಈ ನದಿದಾಟಿ ಆಚೆಯಿರುವ ದೇಶವನ್ನು ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿ ದಾಟಿ ಆಚೆಯಿರುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ಹೊಳೆ ದಾಟಿ ಆಚೆಯಿರುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆದ್ದರಿಂದ ನಾನು ನಿಮಗೆ ನೀವು ಎಲ್ಲಾ ಕಟ್ಟಳೆಗಳಿಗೆ ವಿಧೇಯರಾಗಿ ನಡೆಯಬೇಕು; ಆಗ ನೀವು ಬಲವನ್ನು ಹೊಂದುವಿರಿ; ಜೋರ್ಡನ್ ನದಿಯನ್ನು ದಾಟಿ ದೇವರು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:8
19 ತಿಳಿವುಗಳ ಹೋಲಿಕೆ  

ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.


ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.


ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ.


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಂತೋಷದಿಂದಲೂ ಹರ್ಷದಿಂದಲೂ ಸೇವೆಮಾಡದೆ ಹೋದಿರಿ.


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಯೆಹೋವ ದೇವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನಿಮ್ಮ ಕಣ್ಣುಗಳು ನೋಡಿದವು.


ನೀವು ದಾಟಿ ಹೋಗಿ, ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನ್ಯಾಯನಿಯಮಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಯೆಹೋವ ದೇವರು ನನಗೆ ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು