Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:1 - ಕನ್ನಡ ಸಮಕಾಲಿಕ ಅನುವಾದ

1 ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದಲ್ಲಿ ನೀವು ಬದುಕುವ ದಿವಸಗಳಲ್ಲೆಲ್ಲಾ ಕೈಗೊಂಡು ನಡೆಯತಕ್ಕ ತೀರ್ಪು ಹಾಗು ನಿಯಮಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ನಾಡಿನಲ್ಲೆ ನೀವು ಜೀವಮಾನ ಪರಿಯಂತರ ಅನುಸರಿಸಬೇಕಾದ ಆಜ್ಞಾವಿಧಿಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನೀವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:1
16 ತಿಳಿವುಗಳ ಹೋಲಿಕೆ  

ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.


“ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ? ಮಾನವನ ದಿನಗಳು ಜೀತದಾಳಿನ ದಿನಗಳ ಹಾಗಲ್ಲವೋ?


ನಾನು ಬದುಕುವವರೆಗೂ ಯೆಹೋವ ದೇವರನ್ನು ಸ್ತುತಿಸುವೆನು; ನಾನು ಇರುವವರೆಗೂ ನನ್ನ ದೇವರನ್ನು ಸ್ತುತಿಸುವೆನು.


ನಾನು ಜೀವಿತ ಕಾಲವೆಲ್ಲಾ ಯೆಹೋವ ದೇವರಿಗೆ ಹಾಡುತ್ತಿರುವೆನು. ನಾನು ಬದುಕಿರುವವರೆಗೆ ದೇವರನ್ನು ಸ್ತುತಿಸುತ್ತಿರುವೆನು.


ನೀವು ಭೂಮಿಯ ಮೇಲೆ ಜೀವಿಸುವವರೆಗೆ ಲೇವಿಯರನ್ನು ಬಿಟ್ಟು ಬಿಡದ ಹಾಗೆ ನೋಡಿಕೊಳ್ಳಿರಿ.


ಇಸ್ರಾಯೇಲರು ಈಜಿಪ್ಟಿನೊಳಗಿಂದ ಹೊರಟ ಮೇಲೆ ಮೋಶೆಯು ಇಸ್ರಾಯೇಲರಿಗೆ ನುಡಿದ ಸಾಕ್ಷಿಗಳೂ, ನಿಯಮಗಳೂ, ನ್ಯಾಯಗಳೂ ಇವೇ.


ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ಆಜ್ಞಾವಿಧಿಗಳನ್ನು ಕಾಪಾಡಿ ನಡೆದುಕೊಳ್ಳಬೇಕು.


ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ ನನ್ನ ಮಾರ್ಗಗಳು ಸ್ಥಿರವಾಗಿರಲಿ!


ನಾನೇ ಯೆಹೋವ ದೇವರೂ ನಿಮ್ಮ ದೇವರೂ ಆಗಿದ್ದೇನೆ. ನನ್ನ ನಿಯಮಗಳಲ್ಲೇ ನಡೆಯಿರಿ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಕೈಗೊಂಡು ಅವುಗಳನ್ನೇ ಮಾಡಿರಿ.


ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.


ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು