Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:11 - ಕನ್ನಡ ಸಮಕಾಲಿಕ ಅನುವಾದ

11 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:11
41 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವು ನಿಮ್ಮ ಮನೆಯವರ ಸಹಿತವಾಗಿ ಅವುಗಳಿಂದ ಪ್ರತಿವರ್ಷ ಮಾಂಸಾಹಾರವಾಗಿರಬೇಕು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.


ಒಬ್ಬ ಲೇವಿಯು ಸಮಸ್ತ ಇಸ್ರಾಯೇಲಿನಲ್ಲಿರುವ ಯಾವುದೇ ಊರಿನಲ್ಲಿ ಇಳಿದುಕೊಂಡಿರುವ ಸ್ಥಳದಿಂದ ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಬರಬಹುದು.


ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.


“ ‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.


ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.


ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.


ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದು ಹೇಳಿದನು.


ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.


ಇಸ್ರಾಯೇಲಿನವರೆಲ್ಲರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ನೀವು ಈ ನಿಯಮವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಜನರು ಕೇಳುವ ಹಾಗೆ ಓದಬೇಕು.


ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಒಳ್ಳೆಯದೆಂದು ತೋಚುತ್ತದೆಯೋ, ಅಲ್ಲಿಯೇ ವಾಸವಾಗಲಿ. ಅವನನ್ನು ನೀವು ಕುಗ್ಗಿಸಬಾರದು.


ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ದಶಮಾಂಶವನ್ನೂ ನಿಮ್ಮ ದನಕುರಿಗಳಲ್ಲಿ ಚೊಚ್ಚಲುಗಳನ್ನೂ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ದೇವರೇ ಆಯ್ದುಕೊಂಡ ಸ್ಥಳದಲ್ಲಿ ತಿನ್ನಬೇಕು. ಇದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಎಂದೆಂದಿಗೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಕಲಿಯುವಿರಿ.


ನಿಮಗಿರುವ ಪರಿಶುದ್ಧವಾದವುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾದರೆ, ಯೆಹೋವ ದೇವರು ನಿಮಗೆ ಕೊಟ್ಟ ದನಕುರಿಗಳಿಂದ ನಾನು ನಿಮಗೆ ಆಜ್ಞಾಪಿಸಿದಂತೆ ನಿಮ್ಮ ಊರಲ್ಲೇ ನಿಮಗೆ ಮನಸ್ಸಿದ್ದಷ್ಟು ಮಾಂಸಾಹಾರವನ್ನು ಮಾಡಿ ಉಣ್ಣಬಹುದು.


ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು.


ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು.


“ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.


ಇಸ್ರಾಯೇಲರ ಮಧ್ಯದಲ್ಲಿ ನಾನು ವಾಸಮಾಡಿ, ಅವರಿಗೆ ನಾನು ದೇವರಾಗಿರುವೆನು.


ನೀವು ಕಂಡ ಎಲ್ಲಾ ಸ್ಥಳಗಳಲ್ಲಿ ನಿಮ್ಮ ದಹನಬಲಿಗಳನ್ನು ಅರ್ಪಿಸದಂತೆ ನೋಡಿಕೊಳ್ಳಿರಿ.


ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ.


ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.


ಎಲ್ಕಾನನು ಯೆಹೋವ ದೇವರಿಗೆ ಪ್ರತಿ ವರುಷದ ಬಲಿಯನ್ನೂ, ತನ್ನ ಹರಕೆಯನ್ನೂ ಸಲ್ಲಿಸುವುದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ,


‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ, ಆಲಯವನ್ನು ಕಟ್ಟುವುದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆಯ್ದುಕೊಳ್ಳದೆ, ನನ್ನ ಜನರಾದ ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನು ಆಯ್ದುಕೊಂಡೆನು,’ ಎಂಬುದು.


ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವಂತೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.


ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.


ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.


ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ.


ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.


ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠಿಸಬೇಕು. ನಿಮ್ಮ ಹೋರಿಯ ಚೊಚ್ಚಲಿನಿಂದ ನೀವು ಕೆಲಸ ಮಾಡಿಸಬಾರದು. ನಿಮ್ಮ ಕುರಿಯ ಚೊಚ್ಚಲಲ್ಲಿ ಉಣ್ಣೆ ಕತ್ತರಿಸಬಾರದು.


ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.


ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲರು ದಾಟಿಬಂದ ಯೊರ್ದನ್ ನದಿ ಪ್ರಾಂತದಲ್ಲಿ ಬಲಿಪೀಠವನ್ನು ಕಟ್ಟಿದರೆಂಬ ಸುದ್ದಿ ಇಸ್ರಾಯೇಲರಿಗೆ ಮುಟ್ಟಿತು.


“ಯೆಹೋವ ದೇವರ ಸರ್ವ ಸಮೂಹವು ಹೇಳುವುದೇನೆಂದರೆ: ‘ನೀವು ಈ ಹೊತ್ತು ಯೆಹೋವ ದೇವರ ಕಡೆಗೆ ತಿರುಗದೆ, ಅವರಿಗೆ ವಿರೋಧವಾಗಿ ತಿರುಗಿಬೀಳುವ ಹಾಗೆ ನಿಮಗೆ ಒಂದು ಬಲಿಪೀಠವನ್ನು ಕಟ್ಟಿಕೊಂಡು, ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?


“ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.


ಈ ಜನರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ, ಆಗ ಇವರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಮತ್ತೆ ತಿರುಗುವುದು. ಅವರು ನನ್ನನ್ನು ಕೊಂದುಹಾಕಿ, ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ತಿರುಗಿ ಹೋದಾರು,” ಎಂದುಕೊಂಡನು.


ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?


ಆಗ ದಾವೀದನು, “ಇದೇ ದೇವರಾದ ಯೆಹೋವ ದೇವರ ಆಲಯ, ಮತ್ತು ಇದೇ ಇಸ್ರಾಯೇಲರ ದಹನಬಲಿಪೀಠ,” ಎಂದನು.


ನಾನು ದಹನಬಲಿಯೊಂದಿಗೆ ನಿಮ್ಮ ಆಲಯಕ್ಕೆ ಬರುವೆನು.


ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು