Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:13 - ಕನ್ನಡ ಸಮಕಾಲಿಕ ಅನುವಾದ

13 ನೀವು ಕಂಡ ಎಲ್ಲಾ ಸ್ಥಳಗಳಲ್ಲಿ ನಿಮ್ಮ ದಹನಬಲಿಗಳನ್ನು ಅರ್ಪಿಸದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನಿಮಗೆ ಇಷ್ಟಬಂದ ಸ್ಥಳಗಳಲ್ಲಿ ದಹನಬಲಿಗಳನ್ನು ಸಮರ್ಪಿಸಬಾರದು. ಎಚ್ಚರಿಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮಗೆ ಇಷ್ಟಬಂದ ಸ್ಥಳಗಳಲ್ಲಿ ನೀವು ಬಲಿಯನ್ನು ಅರ್ಪಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:13
11 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನೊಳಗಿಂದ ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರಿಗೆ ಸಮರ್ಪಿತವಾಗಿತ್ತು.


ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಯಾರೊಬ್ಬಾಮನ ಮಾರ್ಗದಲ್ಲಿಯೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದಲ್ಲಿಯೂ ಭಾಗಿಯಾದನು.


ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು.


“ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.


ಆ ಕಾಲದವರೆಗೂ ಯೆಹೋವ ದೇವರ ಹೆಸರಿಗಾಗಿ ಆಲಯ ಇರಲಿಲ್ಲ. ಆದುದರಿಂದ, ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.


ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು