ಧರ್ಮೋಪದೇಶಕಾಂಡ 12:2 - ಕನ್ನಡ ಸಮಕಾಲಿಕ ಅನುವಾದ2 ನೀವು ಸ್ವಾಧೀನ ಮಾಡಿಕೊಳ್ಳುವ ದೇಶದ ಜನಾಂಗಗಳು ತಮ್ಮ ದೇವರುಗಳಿಗೆ ಪೂಜಿಸಿದ ಸ್ಥಳಗಳನ್ನೂ, ಬೆಟ್ಟಗಳ ಮೇಲಿನ ಎತ್ತರ ಸ್ಥಳಗಳನ್ನೂ, ಗುಡ್ಡಗಳ ಹಾಗು ಮರಗಳ ಕೆಳಗಿರುವ ಸ್ಥಳಗಳನ್ನು ನೀವು ಪೂರ್ಣವಾಗಿ ನಾಶಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ ದಿನ್ನೆಗಳ ಮೇಲೆಯೂ ಹರಡಿಕೊಂಡ ಮರಗಳ ಕೆಳಗೆಯೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರಗಳ ಕೆಳಗೂ ಇರುತ್ತವೆ. ಅಧ್ಯಾಯವನ್ನು ನೋಡಿ |