Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:21 - ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾದರೆ, ಯೆಹೋವ ದೇವರು ನಿಮಗೆ ಕೊಟ್ಟ ದನಕುರಿಗಳಿಂದ ನಾನು ನಿಮಗೆ ಆಜ್ಞಾಪಿಸಿದಂತೆ ನಿಮ್ಮ ಊರಲ್ಲೇ ನಿಮಗೆ ಮನಸ್ಸಿದ್ದಷ್ಟು ಮಾಂಸಾಹಾರವನ್ನು ಮಾಡಿ ಉಣ್ಣಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಲು ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾದರೆ, ಅವರು ನಿಮಗೆ ಅನುಗ್ರಹಿಸಿದ ದನಕುರಿಗಳಲ್ಲಿ ಬೇಕಾದಷ್ಟನ್ನು, ನಾನು ಅಪ್ಪಣೆಕೊಟ್ಟ ಮೇರೆಗೆ, ನೀವು ಕೊಯ್ದು ನಿಮ್ಮ ಊರಲ್ಲೇ ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕಾಗಿ ಆದುಕೊಂಡ ಸ್ಥಳವು ನಿಮಗೆ ದೂರವಾದರೆ ಆತನು ನಿಮಗೆ ಅನುಗ್ರಹಿಸಿದ ದನಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:21
13 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.


ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.


ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.


ಆದರೆ ಸೊಲೊಮೋನನ ಮಗ ರೆಹಬ್ಬಾಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.


ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲೇ ಸೂರ್ಯನು ಅಸ್ತಮಿಸುವಾಗ ನೀವು ಈಜಿಪ್ಟನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.


ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿಮ್ಮ ಇಷ್ಟಾನುಸಾರ ಮಾಂಸಾಹಾರವನ್ನು ನಿಮ್ಮ ಎಲ್ಲಾ ಊರುಗಳಲ್ಲಿ ತಿನ್ನಬಹುದು. ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


“ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆ ನಿಮ್ಮ ಮೇರೆಯನ್ನು ವಿಸ್ತಾರಮಾಡುವರು. ಆಗ ನೀವು, “ಮಾಂಸಾಹಾರವನ್ನು ತಿನ್ನಲು ಇಷ್ಟಪಡುತ್ತೇನೆ,” ಎಂದು ಹೇಳಿದರೆ, ತಿನ್ನಬಹುದು.


ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು