Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:25 - ಕನ್ನಡ ಸಮಕಾಲಿಕ ಅನುವಾದ

25 ನೀವು ರಕ್ತವನ್ನು ಭುಜಿಸದಿದ್ದರೆ, ಯೆಹೋವ ದೇವರಿಗೆ ಮೆಚ್ಚುಗೆಯಾಗುವುದು. ಅಲ್ಲದೆ ನಿಮಗೂ, ನಿಮ್ಮ ಮಕ್ಕಳಿಗೂ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೀವು ಅದನ್ನು ಸೇವಿಸದೆ ಸರ್ವೇಶ್ವರನಿಗೆ ಮೆಚ್ಚಿಗೆಯಾಗಿರುವುದನ್ನೇ ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀವು ಅದನ್ನು ಭುಜಿಸದೆ ಯೆಹೋವನಿಗೆ ಮೆಚ್ಚಿಗೆಯಾಗಿರುವದನ್ನು ನಡಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:25
16 ತಿಳಿವುಗಳ ಹೋಲಿಕೆ  

ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು.


ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ನಿಮ್ಮ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಾಗ ಯೆಹೋವ ದೇವರು ತಮ್ಮ ಕೋಪವನ್ನು ಬಿಟ್ಟು, ತಿರುಗಿ ನಿಮಗೆ ದಯೆಯನ್ನು ತೋರಿಸಿ, ನಿಮ್ಮ ಮೇಲೆ ಕನಿಕರಪಟ್ಟು, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು.


ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ.


ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?


ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಅವರ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿಯಾಗಿರುವುದು; ಯಥಾರ್ಥರ ಸಂತತಿಯು ಆಶೀರ್ವಾದ ಹೊಂದುವುದು.


ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡುವುದರಿಂದ ನಿಮಗೂ ನಿಮ್ಮ ಮುಂದೆ ಇರುವ ನಿಮ್ಮ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವ ಹಾಗೆ ನಾನು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡಿರಿ.


ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.


ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.


ಅದನ್ನು ಭುಜಿಸದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.


ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.


ಈ ಪ್ರಕಾರ ನೀವು ಯೆಹೋವ ದೇವರ ಮುಂದೆ ಸರಿಯಾದದ್ದನ್ನು ಮಾಡಿದರೆ, ರಕ್ತಾಪರಾಧವನ್ನು ನಿಮ್ಮಲ್ಲಿಂದ ತೆಗೆದುಹಾಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು