ಧರ್ಮೋಪದೇಶಕಾಂಡ 12:28 - ಕನ್ನಡ ಸಮಕಾಲಿಕ ಅನುವಾದ28 ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡುವುದರಿಂದ ನಿಮಗೂ ನಿಮ್ಮ ಮುಂದೆ ಇರುವ ನಿಮ್ಮ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವ ಹಾಗೆ ನಾನು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. ಏಕೆಂದರೆ ಹೀಗೆ ಮಾಡುವುದರಿಂದ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನೂ ಸೂಕ್ತವಾದುದನ್ನೂ ಮಾಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು ಅವುಗಳನ್ನು ಅನುಸರಿಸಿ ನಿಮ್ಮ ದೇವರಾದ ಯೆಹೋವನಿಗೆ ಒಳ್ಳೇದೂ ಯುಕ್ತವೂ ಆಗಿರುವದನ್ನು ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು. ಅಧ್ಯಾಯವನ್ನು ನೋಡಿ |