Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:29 - ಕನ್ನಡ ಸಮಕಾಲಿಕ ಅನುವಾದ

29 ನೀವು ಮುತ್ತಿಗೆ ಹಾಕಿ ವಶಪಡಿಸಿಕೊಳ್ಳಲಿಕ್ಕಿರುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವ ದೇವರು ತೆಗೆದುಹಾಕುವರು. ನೀವು ಅವರನ್ನು ಹೊರಗೆ ಓಡಿಸಿ, ಅಲ್ಲಿ ನೀವು ನೆಲೆಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನ ಜನಾಂಗಗಳನ್ನು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮುಂದೆ ನಾಶಮಾಡಿದ ತರುವಾಯ, ನೀವು ಅವರ ನಾಡನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ತರುವಾಯ ನೀವು ಅವರ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:29
8 ತಿಳಿವುಗಳ ಹೋಲಿಕೆ  

ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ.


ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.


ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.


ಏಕೆಂದರೆ ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.


ನೀವು ಭ್ರಮೆಗೊಂಡು ನಿಮ್ಮ ಮುಂದೆ ನಾಶವಾದವರ ಬಗ್ಗೆ ವಿಚಾರಣೆ ಮಾಡಬೇಡಿರಿ. “ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಪೂಜಿಸಿದವು? ನಾವೂ ಹಾಗೆ ಮಾಡೋಣ,” ಎಂದು ಹೇಳಬೇಡಿರಿ.


ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು