Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:3 - ಕನ್ನಡ ಸಮಕಾಲಿಕ ಅನುವಾದ

3 ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲುಕಂಬಗಳನ್ನು ಒಡೆಯಬೇಕು; ಅಶೇರ ಎಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾ ಪ್ರತಿಮೆಗಳನ್ನು ಪುಡಿಪುಡಿಮಾಡಿ ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು ಅವರ ದೇವತಾಪ್ರತಿಮೆಗಳನ್ನು ಕಡಿದು ಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:3
25 ತಿಳಿವುಗಳ ಹೋಲಿಕೆ  

‘ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ, ಅವರ ಬಲಿಪೀಠಗಳನ್ನು ಕೆಡಿವಿಬಿಡಿರಿ,’ ಎಂದು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಏಕೆ ಮಾಡಿದಿರಿ?


ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.


“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.


ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ.


ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.


“ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಗೊಳ್ಳಬೇಕು. ಬೇರೆ ದೇವರುಗಳ ಹೆಸರನ್ನು ಎತ್ತಬೇಡ. ಅದನ್ನು ಉಚ್ಚರಿಸಲೂ ಬೇಡ.


ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


ನಿನ್ನ ಅಶೇರ ಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶಮಾಡುವೆನು.


ನಾನು ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯಿಂದ ತೆಗೆದುಹಾಕುವೆನು. ಇನ್ನು ಮುಂದೆ ಅವರ ಹೆಸರನ್ನು ಕರೆಯಲಾಗುವುದಿಲ್ಲ.


ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.


ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.


ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.


ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.


ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.


ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.


ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.


ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.


ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.


ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಆರಾಧಿಸಬಾರದು.


ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.


ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು