Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:30 - ಕನ್ನಡ ಸಮಕಾಲಿಕ ಅನುವಾದ

30 ನೀವು ಭ್ರಮೆಗೊಂಡು ನಿಮ್ಮ ಮುಂದೆ ನಾಶವಾದವರ ಬಗ್ಗೆ ವಿಚಾರಣೆ ಮಾಡಬೇಡಿರಿ. “ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಪೂಜಿಸಿದವು? ನಾವೂ ಹಾಗೆ ಮಾಡೋಣ,” ಎಂದು ಹೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ನೀವು ಭ್ರಮೆಗೊಂಡು, ನಿಮ್ಮ ಮುಂದೆ ನಾಶವಾದವರ ದುಷ್ಟ ಪದ್ಧತಿಗಳನ್ನು ಅನುಸರಿಸದಂತೆ ಜಾಗರೂಕರಾಗಿರಿ; ‘ಈ ನಾಡಿನ ಜನರು ತಮ್ಮ ದೇವರುಗಳನ್ನು ಹೇಗೆ ಪೂಜಿಸುತ್ತಿದ್ದರೋ ಹಾಗೆಯೇ ನಾವೂ ಪೂಜಿಸುವೆವು’ ಎಂದು ಹೇಳಿಕೊಂಡು ಅವರ ದೇವರುಗಳ ಬಗ್ಗೆ ಎಷ್ಟು ಮಾತ್ರವೂ ಕೇಳಿತಿಳಿದುಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಪದ್ಧತಿಗಳನ್ನು ಅನುಸರಿಸಬಾರದು ನೋಡಿರಿ. ನೀವು - ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರು? ಹಾಗೆಯೇ ನಾವೂ ಸೇವಿಸುವೆವು ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:30
22 ತಿಳಿವುಗಳ ಹೋಲಿಕೆ  

“ ‘ “ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.”


ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.


ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.


ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.


ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.


ನೀವು ಮುತ್ತಿಗೆ ಹಾಕಿ ವಶಪಡಿಸಿಕೊಳ್ಳಲಿಕ್ಕಿರುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವ ದೇವರು ತೆಗೆದುಹಾಕುವರು. ನೀವು ಅವರನ್ನು ಹೊರಗೆ ಓಡಿಸಿ, ಅಲ್ಲಿ ನೀವು ನೆಲೆಸಿದಾಗ,


ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.


ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಆರಾಧಿಸುವಾಗ ಮಾಡಿದ ಎಲ್ಲಾ ಅಸಹ್ಯಕರವಾದ ಆಚಾರಗಳನ್ನು ನಿಮಗೆ ಕಲಿಸಿಕೊಡಬಹುದು ಮತ್ತು ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ದ್ರೋಹಿಗಳಾಗಬಹುದು.


ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಆ ಜನಾಂಗಗಳು ಮಾಡುವ ಅಸಹ್ಯ ಕಾರ್ಯಗಳನ್ನು ನೀವು ಕಲಿಯಬಾರದು.


ಅರಸನಾದ ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ, ದಮಸ್ಕದಲ್ಲಿ ಒಂದು ಬಲಿಪೀಠವನ್ನು ಕಂಡನು. ಅರಸನಾದ ಆಹಾಜನು ಆ ಬಲಿಪೀಠದ ರೂಪವನ್ನೂ, ಅದರ ಎಲ್ಲಾ ಕೈಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.


ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು