Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:31 - ಕನ್ನಡ ಸಮಕಾಲಿಕ ಅನುವಾದ

31 ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:31
24 ತಿಳಿವುಗಳ ಹೋಲಿಕೆ  

ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.


ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಆರಾಧಿಸಬಾರದು.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.


“ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.


ಯೆಹೋವ ದೇವರು ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ?


ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಈಜಿಪ್ಟನ್ನು ಜ್ಞಾಪಕಕ್ಕೆ ತರದೇ ಇರುವೆ.


ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


“ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.


“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ನೀವು ಭ್ರಮೆಗೊಂಡು ನಿಮ್ಮ ಮುಂದೆ ನಾಶವಾದವರ ಬಗ್ಗೆ ವಿಚಾರಣೆ ಮಾಡಬೇಡಿರಿ. “ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಪೂಜಿಸಿದವು? ನಾವೂ ಹಾಗೆ ಮಾಡೋಣ,” ಎಂದು ಹೇಳಬೇಡಿರಿ.


ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಆರಾಧಿಸುವಾಗ ಮಾಡಿದ ಎಲ್ಲಾ ಅಸಹ್ಯಕರವಾದ ಆಚಾರಗಳನ್ನು ನಿಮಗೆ ಕಲಿಸಿಕೊಡಬಹುದು ಮತ್ತು ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ದ್ರೋಹಿಗಳಾಗಬಹುದು.


ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದನು. ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.


ತಮ್ಮ ಗಂಡು ಮಕ್ಕಳನ್ನೂ, ಹೆಣ್ಣು ಮಕ್ಕಳನ್ನೂ ಸುಳ್ಳು ದೇವರುಗಳಿಗೆ ಬಲಿಕೊಟ್ಟರು.


ಆಗ ಮೋವಾಬಿನ ಅರಸನು ತನಗೆ ಬದಲಾಗಿ ಆಳುವುದಕ್ಕಿರುವ ತನ್ನ ಹಿರಿಯ ಮಗನನ್ನು ತೆಗೆದುಕೊಂಡು, ಅವನನ್ನು ಗೋಡೆಯ ಮೇಲೆ ದಹನಬಲಿಯಾಗಿ ಅರ್ಪಿಸಿದನು. ಮೋವಾಬ್ಯರು ಇಸ್ರಾಯೇಲರಿಗೆ ವಿರೋಧವಾಗಿ ರೋಷವುಳ್ಳವರಾಗಿ ಅವರನ್ನು ಬಿಟ್ಟು, ತಮ್ಮ ದೇಶಕ್ಕೆ ಹಿಂದಿರುಗಿ ಹೋದರು.


ಅವ್ವೀಯರು ನಿಭಜ್, ತರ್ತಕ್ ಎಂಬ ದೇವತೆಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾದ ಅದ್ರಮ್ಮೆಲೆಕ್, ಅನಮ್ಮೇಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಅಗ್ನಿಬಲಿ ಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು