Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:13 - ಕನ್ನಡ ಸಮಕಾಲಿಕ ಅನುವಾದ

13 ದುಷ್ಟಜನರು ಎದ್ದು ತಮ್ಮ ಪಟ್ಟಣದಲ್ಲಿರುವ ಜನರನ್ನು, “ನೀವು ತಿಳಿಯದಿರುವ ಇತರ ದೇವರುಗಳನ್ನು ಪೂಜಿಸೋಣ ಬನ್ನಿರಿ,” ಎಂದು ಹೇಳಿ ದುರ್ಮಾಗಕ್ಕೆ ಎಳೆದಿದ್ದಾರೆ ಎಂಬ ಸುದ್ದಿ ನಿಮಗೆ ತಿಳಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಲ್ಲಿ ವಾಸವಾಗಿರುವ ಇಸ್ರಯೇಲರಲ್ಲಿ ಕೆಲವು ಮಂದಿ ದುಷ್ಟರು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಬಹುದು. ‘ಆ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಲ್ಲಿ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಕೆಲವು ಮಂದಿ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಿ - ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ಸ್ವಂತ ದೇಶದಲ್ಲಿರುವ ಕೆಲವು ಕೆಟ್ಟ ಜನರು ಕೆಟ್ಟದ್ದನ್ನು ಮಾಡಲು ತಮ್ಮ ಪಟ್ಟಣದ ಜನರನ್ನು ಒತ್ತಾಯಪಡಿಸುತ್ತಿದ್ದಾರೆಂದು ನೀವು ಕೇಳಬಹುದು. ಅವರು ತಮ್ಮ ಪಟ್ಟಣದ ಜನರಿಗೆ, ‘ನಾವು ಹೋಗಿ ಬೇರೆ ದೇವರುಗಳ ಸೇವೆಮಾಡೋಣ’ ಎಂದು ಹೇಳಬಹುದು. (ಈ ದೇವರುಗಳನ್ನು ನೀವು ಹಿಂದೆಂದೂ ತಿಳಿದಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:13
24 ತಿಳಿವುಗಳ ಹೋಲಿಕೆ  

ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


“ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ,” ಎಂದು ಬೋಧಿಸಬಹುದು. ಆ ಬೋಧನೆಯನ್ನು ರುಜುವಾತುಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಸಹ ಹೇಳಬಹುದು.


ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.


ಕ್ರಿಸ್ತ ಯೇಸುವಿಗೂ ಪಿಶಾಚನಿಗೂ ಐಕ್ಯತೆಯೇನು? ಅಥವಾ ಕ್ರಿಸ್ತ ವಿಶ್ವಾಸಿಗೂ ಅವಿಶ್ವಾಸಿಗೂ ಹುದುವಾಗಿರುವುದೇನು?


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.


‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.


ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”


ಶಿಮ್ಮಿಯು ಅರಸನನ್ನು ದೂಷಿಸುತ್ತಾ, “ಕೊಲೆಗಾರನೇ, ನೀಚನೇ, ಹೊರಟು ಹೋಗು; ಹೊರಟು ಹೋಗು.


ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.


ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.


ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು. ಆದರೆ ಬೆನ್ಯಾಮೀನ್ಯರು ಇಸ್ರಾಯೇಲರಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿಲ್ಲದೆ,


ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.


ಇದಲ್ಲದೆ ನಿಷ್ಪ್ರಯೋಜಕರಾದ ದುಷ್ಟರು ಅವನ ಬಳಿಗೆ ಕೂಡಿಬಂದು, ಸೊಲೊಮೋನನ ಮಗ ರೆಹಬ್ಬಾಮನು ಎಳೆಯ ಪ್ರಾಯದವನೂ, ನಿರ್ಣಯಿಸಲಾಗದವನೂ ಅವರನ್ನು ಎದುರಿಸಲು ಬಲವಿಲ್ಲದವನೂ ಆಗಿರುವುದರಿಂದ ಅವನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡರು.


ದೇವರು ಇಸ್ರಾಯೇಲನ್ನು ದಾವೀದನ ಸಂತಾನದಿಂದ ವಿಭಾಗಿಸಿದಾಗ, ಅವರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲನ್ನು ಯೆಹೋವ ದೇವರ ಮಾರ್ಗದಿಂದ ತಪ್ಪಿಸಿ, ಮಹಾ ಪಾಪಮಾಡಲು ಪ್ರೇರೇಪಿಸಿದನು.


ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ.


ನನ್ನ ಒಡೆಯನೇ, ದಯಮಾಡಿ ದುಷ್ಟನಾದ ನಾಬಾಲನ ಮೇಲೆ ಲಕ್ಷ್ಯವಿಡಬೇಡ. ಏಕೆಂದರೆ ಅವನ ಹೆಸರು ಹೇಗೋ, ಹಾಗೆಯೇ ಅವನು. ಅವನು ನಾಬಾಲನೆಂಬ ಹೆಸರುಳ್ಳವನು. ಬುದ್ಧಿಹೀನತೆ ಅವನಲ್ಲಿ ಇದೆ. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಸೇವಕರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.


ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.


ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಸಮಾಡುವುದಕ್ಕೆ ಕೊಡುವ ಯಾವುದಾದರೂ ಪಟ್ಟಣದಲ್ಲಿ


ನೀವು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು. ಆ ಕಾರ್ಯವು ನಿಶ್ಚಯವಾಗಿ ಸತ್ಯವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,


ಆ ಸಂಗತಿಯನ್ನು ನೀವು ಕೇಳಿದಾಗ ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ಅಸಹ್ಯಕರವಾದ ಕಾರ್ಯವು ನಡೆದದ್ದು ಸತ್ಯವೆಂದು ತಿಳಿದುಬಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು