ಧರ್ಮೋಪದೇಶಕಾಂಡ 13:15 - ಕನ್ನಡ ಸಮಕಾಲಿಕ ಅನುವಾದ15 ಆ ಊರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅದನ್ನೂ, ಅದರಲ್ಲಿರುವ ಎಲ್ಲದನ್ನೂ, ಅದರ ಪಶುಗಳನ್ನೂ ಸಹ ಶಪಿಸಿ ಖಡ್ಗದಿಂದ ನಿರ್ಮೂಲ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅದರಲ್ಲಿ ಇರುವ ಎಲ್ಲ ಜನರನ್ನೂ ಜಾನುವಾರುಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಿ ಅದರಲ್ಲಿರುವ ಎಲ್ಲಾ ಜನರನ್ನೂ ದನಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀವು ಆ ಪಟ್ಟಣದ ಜನರನ್ನು ದಂಡಿಸಬೇಕು; ಅವರೆಲ್ಲರನ್ನೂ ಕೊಲ್ಲಬೇಕು; ಅವರ ಎಲ್ಲಾ ಪಶುಗಳನ್ನು ಸಹ ಕೊಲ್ಲಬೇಕು. ಆ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.