Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:17 - ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17-18 ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:17
26 ತಿಳಿವುಗಳ ಹೋಲಿಕೆ  

ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ.


ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ.


ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೆರೆಯಿಂದ ಬಿಡಿಸಿ, ನಿಮ್ಮ ಮೇಲೆ ಕನಿಕರಿಸಿ, ಅವರು ನಿಮ್ಮನ್ನು ಚದರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿಮ್ಮನ್ನು ಕೂಡಿಸುವರು.


ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.


ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.


ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.


ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು.


ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.


ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.”


ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.


ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”


ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ.


ನಿಮ್ಮ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಾಗ ಯೆಹೋವ ದೇವರು ತಮ್ಮ ಕೋಪವನ್ನು ಬಿಟ್ಟು, ತಿರುಗಿ ನಿಮಗೆ ದಯೆಯನ್ನು ತೋರಿಸಿ, ನಿಮ್ಮ ಮೇಲೆ ಕನಿಕರಪಟ್ಟು, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು.


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳು ಸ್ವಾಧೀನ ಮಾಡಿಕೊಂಡ ದೇಶಕ್ಕೆ ನಿಮ್ಮನ್ನು ತರುವರು. ನೀವು ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ದೇವರು ನಿಮ್ಮ ಪಿತೃಗಳಿಗಿಂತಲೂ ನಿಮ್ಮನ್ನು ಸಮೃದ್ಧಿಗೊಳಿಸಿ ಹೆಚ್ಚಿಸುವರು.


ನಿಮ್ಮ ಕೋಪವನ್ನೆಲ್ಲಾ ತೆಗೆದುಬಿಟ್ಟಿದ್ದೀರಿ. ನಿಮ್ಮ ಬೇಸರದಿಂದ ತಿರುಗಿಕೊಂಡಿದ್ದೀರಿ.


ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ.


ಆದರೆ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿಬಂಗಾರವನ್ನೂ ಕಂಚು ಕಬ್ಬಿಣ ಪಾತ್ರೆಗಳನ್ನು ಮಾತ್ರ ಯೆಹೋವ ದೇವರ ಮನೆಯ ಭಂಡಾರದಲ್ಲಿ ಇಟ್ಟರು.


ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು