Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:2 - ಕನ್ನಡ ಸಮಕಾಲಿಕ ಅನುವಾದ

2 “ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ,” ಎಂದು ಬೋಧಿಸಬಹುದು. ಆ ಬೋಧನೆಯನ್ನು ರುಜುವಾತುಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಸಹ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ’ ಎಂದು ಬೋಧಿಸಬಹುದು; ಆ ಬೋಧನೆಯನ್ನು ರುಜುವಾತು ಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈ ದೇವತೆಗಳನ್ನು ಅವಲಂಬಿಸಿ ಸೇವಿಸೋಣ ಎಂದು ಬೋಧಿಸುತ್ತಾ ಆ ಬೋಧನೆಯನ್ನು ಸ್ಥಾಪಿಸುವದಕ್ಕೆ ಒಂದು ಅದ್ಭುತವನ್ನಾಗಲಿ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಲು ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಅದ್ಭುತಕಾರ್ಯಗಳನ್ನು ಮಾಡಿತೋರಿಸಬಹುದು. ಆಮೇಲೆ ಅವನು ನಿಮಗೆ ಗೊತ್ತಿಲ್ಲದ ದೇವರನ್ನು ಅನುಸರಿಸಲು ನಿಮಗೆ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:2
16 ತಿಳಿವುಗಳ ಹೋಲಿಕೆ  

ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು.


ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ, “ಯೆಹೋವ ದೇವರು ಇದಕ್ಕೆ ಹೇಳಿದ ಗುರುತೇನೆಂದರೆ, ಇಗೋ, ಬಲಿಪೀಠವು ಸೀಳಿಹೋಗಿ, ಅದರ ಮೇಲೆ ಇರುವ ಬೂದಿಯು ಬಿದ್ದುಹೋಗುವುದು,” ಎಂದನು.


ದುಷ್ಟಜನರು ಎದ್ದು ತಮ್ಮ ಪಟ್ಟಣದಲ್ಲಿರುವ ಜನರನ್ನು, “ನೀವು ತಿಳಿಯದಿರುವ ಇತರ ದೇವರುಗಳನ್ನು ಪೂಜಿಸೋಣ ಬನ್ನಿರಿ,” ಎಂದು ಹೇಳಿ ದುರ್ಮಾಗಕ್ಕೆ ಎಳೆದಿದ್ದಾರೆ ಎಂಬ ಸುದ್ದಿ ನಿಮಗೆ ತಿಳಿಸಿದರೆ,


ಆದರೆ ಈಜಿಪ್ಟಿನ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.


ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.”


ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.


“ಪಶುವಿನ ಸಂಗಡ ಸಂಗಮಿಸುವ ಯಾರಾದರೂ ಸರಿ, ಅಂಥವನಿಗೆ ಮರಣದಂಡನೆಯಾಗಬೇಕು.


‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು. ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು. ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ. ವ್ಯರ್ಥವಾಗಿ ಆದರಿಸುತ್ತಾರೆ, ಆದ್ದರಿಂದ ಕುರಿಗಳಂತೆ ಚದರಿದ್ದಾರೆ, ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು