Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:5 - ಕನ್ನಡ ಸಮಕಾಲಿಕ ಅನುವಾದ

5 ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:5
34 ತಿಳಿವುಗಳ ಹೋಲಿಕೆ  

ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”


ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.”


ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.


ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.


ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.


ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.


ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.


“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.


ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.


ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.


ಏಕೆಂದರೆ ಅವರು ನಿಮ್ಮ ಪುತ್ರರನ್ನು ಬೇರೆ ದೇವರುಗಳನ್ನು ಸೇವಿಸುವ ಹಾಗೆ ನನ್ನಿಂದ ತೊಲಗಿಸಿಬಿಡುವರು. ಆಗ ಯೆಹೋವ ದೇವರು ನಿಮ್ಮ ಮೇಲೆ ಕೋಪಗೊಂಡು, ನಿಮ್ಮನ್ನು ಬೇಗ ದಂಡಿಸಿಬಿಡುವರು.


ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲು ಎಸೆಯಬೇಕು, ತರುವಾಯ ಜನರೆಲ್ಲರೂ ಎಸೆಯಲಿ.


ಆ ಊರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅದನ್ನೂ, ಅದರಲ್ಲಿರುವ ಎಲ್ಲದನ್ನೂ, ಅದರ ಪಶುಗಳನ್ನೂ ಸಹ ಶಪಿಸಿ ಖಡ್ಗದಿಂದ ನಿರ್ಮೂಲ ಮಾಡಬೇಕು.


ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು.


ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು. ಆದರೆ ಬೆನ್ಯಾಮೀನ್ಯರು ಇಸ್ರಾಯೇಲರಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿಲ್ಲದೆ,


ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”


ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.


ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.


ಆದರೆ, ಈವರೆಗೂ ಹೇಗೋ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿರಿ.


ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ.


ಹಾಗೆಯೇ ದೇವರ ಮನುಷ್ಯನು ವೃದ್ಧನ ಸಂಗಡ ಹಿಂದಿರುಗಿ ಹೋಗಿ, ಅವನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನು.


ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು