Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:7 - ಕನ್ನಡ ಸಮಕಾಲಿಕ ಅನುವಾದ

7 ನಿಮಗೆ ಸಮೀಪವಾಗಲಿ, ನಿಮಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯವರೆಗೆ ನಿಮ್ಮ ಸುತ್ತಲಿರುವ ಜನರ ದೇವರುಗಳನ್ನು ಸೇವಿಸೋಣ,” ಎಂದು ನಿಮ್ಮನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾಗಿದ್ದರೂ ದೂರವಾದವರ ದೇವರುಗಳಾಗಿದ್ದರೂ ಭೂಲೋಕದ ಯಾವ ಭಾಗದವರ ದೇವರುಗಳಾಗಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಅಂತರಂಗದಲ್ಲಿ ನಿಮಗೆ ಬೋಧಿಸಿದರೆ ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ ದೂರವಾದವರ ದೇವರುಗಳಾದರೂ ಭೂಲೋಕದ ಯಾವ ಭಾಗದವರ ದೇವರುಗಳಾದರೂ ನೀವು ಸಮ್ಮತಿಸಲೂಬಾರದು ಕಿವಿಗೊಡಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವು ನಿಮ್ಮ ಸುತ್ತಮುತ್ತಲಿರುವ ಬೇರೆ ದೇಶಗಳಲ್ಲಿ ವಾಸವಾಗಿರುವ ಜನರ ದೇವರುಗಳು, ಅವುಗಳಲ್ಲಿ ಕೆಲವು ಹತ್ತಿರದವುಗಳಾಗಿವೆ; ಕೆಲವು ದೂರದವುಗಳಾಗಿವೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:7
7 ತಿಳಿವುಗಳ ಹೋಲಿಕೆ  

ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ನೀವು ಅವರಿಗೆ ಸಮ್ಮತಿಸಬಾರದು. ಅವರ ಮಾತನ್ನು ಕೇಳಬಾರದು. ನೀವು ಅವರನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.


ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”


ನಿಮ್ಮ ಸುತ್ತಲಿರುವ ಜನರ ದೇವರುಗಳಾಗಿರುವ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಅವನ ತಾಯಿಯ ದುರ್ಬೋಧನೆಯಿಂದ ಅವನು ದುಷ್ಟನಾಗಿ ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದನು.


ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು