Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:9 - ಕನ್ನಡ ಸಮಕಾಲಿಕ ಅನುವಾದ

9 ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲು ಎಸೆಯಬೇಕು, ತರುವಾಯ ಜನರೆಲ್ಲರೂ ಎಸೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲೆಸೆಯಬೇಕು; ತರುವಾಯ ಜನರೆಲ್ಲರೂ ಎಸೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ನೀವು ಅವನನ್ನು ಕೊಂದುಹಾಕಬೇಕು. ನೀವು ಕಲ್ಲೆಸೆದು ಅವನನ್ನು ಸಾಯಿಸಬೇಕು. ನೀವು ಅವನ ಮೇಲೆ ಮೊದಲನೆ ಕಲ್ಲನ್ನು ಎಸೆಯಬೇಕು. ಈಜಿಪ್ಟಿನ ದಾಸತ್ವದಿಂದ ನಿಮ್ಮನ್ನು ಬಿಡಿಸಿಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಡೆದುಕೊಳ್ಳುವಂತೆ ನಿಮ್ಮನ್ನು ಪ್ರೇರೇಪಿಸಿದವನು ಅವನೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:9
10 ತಿಳಿವುಗಳ ಹೋಲಿಕೆ  

ಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು.


ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.


“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


“ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.


ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.


ಅವಳ ಕೈಯನ್ನು ಕಡಿದುಹಾಕಬೇಕು. ಅವಳಿಗೆ ಕರುಣೆ ತೋರಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು