Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:2 - ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:2
23 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ.


ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


“ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನೀವು ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಪಾಲಿಸಿ, ಅವರ ಮಾರ್ಗಗಳಲ್ಲಿ ನಡೆದರೆ, ಯೆಹೋವ ದೇವರು ನಿಮಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ತಮಗೆ ಮೀಸಲಾದ ಪರಿಶುದ್ಧ ಜನರನ್ನಾಗಿ ಸ್ಥಾಪಿಸುವರು.


ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು.


ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು.


ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


“ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ,


ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು.


ನಿಶ್ಚಯವಾಗಿ ನೀವು ಜನರನ್ನು ಪ್ರೀತಿಸುತ್ತೀರಿ. ಪರಿಶುದ್ಧ ಜನರು ನಿಮ್ಮ ಆಶ್ರಯದಲ್ಲಿಯೇ ಇದ್ದಾರೆ. ನಿಮ್ಮ ಪಾದಗಳಿಗೆ ಎಲ್ಲರೂ ಎರಗುವರು. ನಿಮ್ಮಿಂದಲೇ ಬೋಧನೆ ಪಡೆಯುವರು.


ಇಸ್ರಾಯೇಲರು ತಮಗೂ, ತಮ್ಮ ಪುತ್ರರಿಗೂ ಅವರ ಪುತ್ರಿಯರನ್ನು ತೆಗೆದುಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ. ನಿಶ್ಚಯವಾಗಿ ಪ್ರಧಾನರು ಮತ್ತು ಅಧಿಕಾರಸ್ಥರು ಈ ಅಪನಂಬಿಗಸ್ತಿಕೆಗೆ ಮುಂದಾಳುಗಳಾದರು,” ಎಂದು ತಿಳಿಸಿದರು.


ನಿನ್ನನ್ನು ಭೂಮಿಯ ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ದೂರದ ಕೊನೆಯಿಂದ ಕರೆದು, ‘ನೀನು ನನ್ನ ಸೇವಕನು,’ ನಿನ್ನನ್ನು ನಾನು ಆಯ್ದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವುದಿಲ್ಲ.


ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನೀವು ಎಲ್ಲಾ ಜನರಿಗಿಂತ ಹೆಚ್ಚಾಗಿರುವ ಕಾರಣ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ. ನೀವು ಎಲ್ಲಾ ಜನರಿಗಿಂತ ಸಂಖ್ಯಾತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು