Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವು ಮೆಲುಕು ಹಾಕುವಂಥವುಗಳಾದರೂ, ಸೀಳುಗೊರಸು ಇಲ್ಲವಾದದ್ದರಿಂದ ಅವು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವುಗಳು ಮೆಲುಕು ಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕುಹಾಕುವದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ದೃಷ್ಟಾಂತ - ಒಂಟೆ, ಮೊಲ, ಬೆಟ್ಟದ ಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಒಂಟೆ, ಮೊಲ, ಬೆಟ್ಟದ ಮೊಲ ಇವುಗಳನ್ನು ತಿನ್ನಬಾರದು. ಈ ಪ್ರಾಣಿಗಳು ಮೆಲುಕು ಹಾಕುತ್ತವೆ ಆದರೆ ಅವುಗಳ ಗೊರಸು ಸೀಳಿಲ್ಲ. ಆದ್ದರಿಂದ ಅವುಗಳು ಶುದ್ಧಪ್ರಾಣಿಗಳಲ್ಲ. ನೀವು ಅವುಗಳನ್ನು ಆಹಾರವಾಗಿ ಉಪಯೋಗಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:7
10 ತಿಳಿವುಗಳ ಹೋಲಿಕೆ  

ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.


ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ.


ಬೆಟ್ಟದ ಕುಣಿ ಮೊಲವು ಮೇವನ್ನು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.


ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು.


ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥಾದ್ದಾದರೆ ಅದರ ಮಾಂಸವನ್ನು ತಿನ್ನಬಹುದು.


ಹಂದಿಯನ್ನು ತಿನ್ನಬಾರದು. ಏಕೆಂದರೆ ಅದು ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲ. ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ನೀವು ತಿನ್ನಬಾರದು, ಅವುಗಳ ಹೆಣವನ್ನು ಮುಟ್ಟಬಾರದು.


ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು