ಧರ್ಮೋಪದೇಶಕಾಂಡ 14:8 - ಕನ್ನಡ ಸಮಕಾಲಿಕ ಅನುವಾದ8 ಹಂದಿಯನ್ನು ತಿನ್ನಬಾರದು. ಏಕೆಂದರೆ ಅದು ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲ. ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ನೀವು ತಿನ್ನಬಾರದು, ಅವುಗಳ ಹೆಣವನ್ನು ಮುಟ್ಟಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹಂದಿಯ ಗೊರಸು ಸೀಳಿದ್ದರೂ ಅದು ಮೆಲುಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಹಂದಿಗಳನ್ನು ತಿನ್ನಬಾರದು. ಅವುಗಳ ಗೊರಸುಗಳು ಸೀಳಿವೆ; ಆದರೆ ಅವುಗಳು ಮೆಲುಕು ಹಾಕುವುದಿಲ್ಲ. ಆದ್ದರಿಂದ ಹಂದಿಯು ನಿಮಗೆ ಶುದ್ಧ ಆಹಾರವಾಗುವುದಿಲ್ಲ; ಹಂದಿಯ ಹೆಣವನ್ನೂ ನೀವು ಮುಟ್ಟಬಾರದು. ಅಧ್ಯಾಯವನ್ನು ನೋಡಿ |
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.