Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:1 - ಕನ್ನಡ ಸಮಕಾಲಿಕ ಅನುವಾದ

1 ಪ್ರತಿ ಏಳು ವರ್ಷಗಳ ಅಂತ್ಯದಲ್ಲಿ ಎಲ್ಲರ ಸಾಲಗಳನ್ನೂ ಮನ್ನಾಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಏಳು ಸಂವತ್ಸರಗಳು ಕಳೆದನಂತರ ಬಡವರಿಗೆ ಬಿಡುಗಡೆ ಸಿಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಏಳು ಸಂವತ್ಸರಗಳು ಕಳೆದನಂತರ ಬಡವರಿಗೆ ಬಿಡುಗಡೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಪ್ರತೀ ಏಳು ವರ್ಷಗಳ ಅಂತ್ಯದಲ್ಲಿ ನೀವು ಕೊಟ್ಟ ಸಾಲಗಳನ್ನು ವಜಾಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:1
11 ತಿಳಿವುಗಳ ಹೋಲಿಕೆ  

ಅನಂತರ ಮೋಶೆಯು ಅವರಿಗೆ, “ಪ್ರತಿ ಏಳು ವರ್ಷ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರ್ಷದಲ್ಲಿ ಅಂದರೆ, ಗುಡಾರಗಳ ಹಬ್ಬದಲ್ಲಿ


“ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ.


ನೀವು ಮಾಡಬೇಕಾದ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಾದ ಇಸ್ರಾಯೇಲರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡಬೇಕು. ಅದು ಯೆಹೋವ ದೇವರ ಬಿಡುಗಡೆಯ ವರ್ಷ ಎಂದು ಪ್ರಕಟವಾಗಿರುವುದರಿಂದ ತನ್ನ ನೆರೆಯವನಿಂದಲೂ, ತನ್ನ ಸಹೋದರನಿಂದಲೂ ಸಾಲವನ್ನು ಕೇಳಬಾರದು.


“ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.


ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.


‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು