Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:13 - ಕನ್ನಡ ಸಮಕಾಲಿಕ ಅನುವಾದ

13 ಹಾಗೆ ಬಿಟ್ಟುಬಿಡುವಾಗ ಬರೀ ಕೈಯಲ್ಲಿ ಕಳುಹಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಿಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಿಡುವಾಗ ಬರೀಗೈಯಲ್ಲಿ ಕಳುಹಿಸಿಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರನ್ನು ಹಿಂದಕ್ಕೆ ಕಳುಹಿಸುವಾಗ ಬರೀಗೈಯಲ್ಲಿ ಕಳುಹಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:13
9 ತಿಳಿವುಗಳ ಹೋಲಿಕೆ  

“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ!


ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ, ಯೋಗ್ಯವಾದದ್ದನ್ನೂ ಕೊಡಿರಿ.


“ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ.


ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ನಿಮ್ಮ ಸಹೋದರನಾದ ಹಿಬ್ರಿಯನಾಗಲಿ, ಒಬ್ಬ ಹಿಬ್ರಿಯ ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ, ಆರು ವರ್ಷ ನಿಮಗೆ ಮಾರಾಟವಾಗಿದ್ದರೆ ಮತ್ತು ಸೇವೆ ಮಾಡಿದ್ದರೆ, ಏಳನೆಯ ವರ್ಷದಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿಬಿಡಿರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅಂದರೆ ನಿಮ್ಮ ಕುರಿಮಂದೆಯಿಂದಲೂ ಕಣದಿಂದಲೂ ದ್ರಾಕ್ಷಿ ಆಲೆಯದಿಂದಲೂ ಅವರಿಗೆ ಧಾರಾಳವಾಗಿ ಕೊಟ್ಟುಕಳುಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು