Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:19 - ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠಿಸಬೇಕು. ನಿಮ್ಮ ಹೋರಿಯ ಚೊಚ್ಚಲಿನಿಂದ ನೀವು ಕೆಲಸ ಮಾಡಿಸಬಾರದು. ನಿಮ್ಮ ಕುರಿಯ ಚೊಚ್ಚಲಲ್ಲಿ ಉಣ್ಣೆ ಕತ್ತರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ದನಗಳಲ್ಲೂ ಆಡುಕುರಿಗಳಲ್ಲೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದನಗಳಲ್ಲಿಯೂ ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು.; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಿಮ್ಮ ಹಿಂಡಿನಲ್ಲಾಗಲಿ ಹಟ್ಟಿಯಲ್ಲಾಗಲಿ ಚೊಚ್ಚಲ ಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:19
18 ತಿಳಿವುಗಳ ಹೋಲಿಕೆ  

“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.


ನಿಮ್ಮಲ್ಲಿಯೂ ನಿಮ್ಮ ಪಶುಪ್ರಾಣಿಗಳಲ್ಲಿಯೂ ಹುಟ್ಟುವ ಪ್ರತಿಯೊಂದು ಗರ್ಭದ ಪ್ರಥಮ ಫಲವನ್ನು ನೀವು ಯೆಹೋವ ದೇವರಿಗೆ ಕೊಡಬೇಕು.


ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಂದೆತಾಯಿ ಇಲ್ಲದವರೂ ಹಾಗೂ ವಿಧವೆಯರೂ ಸಂಭ್ರಮದಿಂದಿರಬೇಕು.


ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆಗಳ ದಶಮಾಂಶವನ್ನೂ, ನಿಮ್ಮ ದನಕುರಿಗಳ ಚೊಚ್ಚಲಾದವುಗಳನ್ನೂ, ನೀವು ಮಾಡುವ ಎಲ್ಲಾ ಹರಕೆಯ ಪದಾರ್ಥಗಳನ್ನೂ, ನಿಮ್ಮ ಉಚಿತವಾದ ಕಾಣಿಕೆಗಳನ್ನೂ, ಯಾಜಕರಿಗೆ ಪ್ರತ್ಯೇಕಿಸಿದ ಅರ್ಪಣೆಗಳನ್ನೂ ನಿಮ್ಮ ಊರುಗಳಲ್ಲಿ ತಿನ್ನಬೇಡಿರಿ.


“ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು.


ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.


“ ‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.


ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ದಶಮಾಂಶವನ್ನೂ ನಿಮ್ಮ ದನಕುರಿಗಳಲ್ಲಿ ಚೊಚ್ಚಲುಗಳನ್ನೂ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ದೇವರೇ ಆಯ್ದುಕೊಂಡ ಸ್ಥಳದಲ್ಲಿ ತಿನ್ನಬೇಕು. ಇದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಎಂದೆಂದಿಗೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಕಲಿಯುವಿರಿ.


ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”


“ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ಪಶುಗಳಾಗಲಿ, ಎತ್ತುಗಳಾಗಲಿ, ಟಗರುಗಳಾಗಲಿ ಮೊದಲು ಹುಟ್ಟುವವುಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ.


ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.


ಅದರಂತೆಯೇ ನಿಮ್ಮ ದನಕುರಿಗಳನ್ನೂ ನನಗೆ ಸಮರ್ಪಿಸಬೇಕು. ಅದು ಏಳು ದಿನಗಳು ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ಒಬ್ಬ ಗುಲಾಮನನ್ನು ನಿಮ್ಮಿಂದ ಬಿಡುಗಡೆಯಾಗಿ ಕಳುಹಿಸುವುದು ನಿಮಗೆ ಕಷ್ಟವೆಂದು ಹೇಳಿಕೊಳ್ಳಬಾರದು. ಏಕೆಂದರೆ ಅವನು ಆರು ವರ್ಷ ನಿಮ್ಮ ದಾಸನಾಗಿದ್ದದರಿಂದ ಸಂಬಳದ ಸೇವಕನಿಗಿಂತ ಎರಡಷ್ಟಾಗಿದ್ದನು. ಹೀಗೆ ನಿಮ್ಮ ದೇವರಾದ ಯೆಹೋವ ದೇವರು ನೀವು ಮಾಡುವುದೆಲ್ಲದರಲ್ಲಿಯೂ ನಿಮ್ಮನ್ನು ಆಶೀರ್ವದಿಸುವರು.


“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು