Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:4 - ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದಲ್ಲಿ ಯೆಹೋವ ದೇವರು ನಿಮ್ಮನ್ನು ಬಹಳವಾಗಿ ಆಶೀರ್ವದಿಸುವರು. ಹೀಗಾಗಿ ನಿಮ್ಮಲ್ಲಿ ಬಡವರೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4-5 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ, ಸರ್ವೇಶ್ವರ ನಿಮಗೆ ಸ್ವದೇಶವಾಗಿ ಕೊಡುವ ನಾಡಿನಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವರು. ಈ ಕಾರಣ, ನಿಮ್ಮಲ್ಲಿ ಬಡವರೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-5 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವದರಿಂದ ನಿಮ್ಮಲ್ಲಿ ಬಡವರೇ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕೆಂದರೆ ಯೆಹೋವನೇ ನಿಮಗೆ ಈ ದೇಶವನ್ನು ಕೊಡುತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:4
10 ತಿಳಿವುಗಳ ಹೋಲಿಕೆ  

ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.


ನಿಮಗೆ ಕೊಡುತ್ತೇನೆಂದು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಯೆಹೋವ ದೇವರು ಭೂಮಿಯ ಮೇಲೆ ನಿಮ್ಮನ್ನು ಸಂತಾನ, ಪಶು ಮತ್ತು ಕೃಷಿ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವರು.


ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.


ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.


ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆಯಿರಿ.


ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.


ನಾನು ಯೊರ್ದನಿನ ಆಚೆಗೆ ಹೋಗದ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಆ ಒಳ್ಳೆಯ ದೇಶದಲ್ಲಿ ಪ್ರವೇಶಿಸದಂತೆ, ನಿಮ್ಮ ನಿಮಿತ್ತ ಯೆಹೋವ ದೇವರು ನನ್ನ ಮೇಲೆ ಕೋಪಮಾಡಿಕೊಂಡು ಪ್ರಮಾಣ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು